2 ಸಮುಯೇಲ 13:20 - ಕನ್ನಡ ಸಮಕಾಲಿಕ ಅನುವಾದ20 ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣ ಅಮ್ನೋನನು ನಿನ್ನ ಮಾನಭಂಗ ಮಾಡಿದನೇ? ನನ್ನ ತಂಗೀ, ತಕ್ಷಣಕ್ಕೆ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೇ? ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ,” ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು - ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಕೂಡಿದನೇನು? ನನ್ನ ತಂಗಿಯೇ, ಈಗ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತಾಮಾರಳ ಸೋದರನಾದ ಅಬ್ಷಾಲೋಮನು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನು ನಿನ್ನನ್ನು ಕೆಡಿಸಿ ಬಿಟ್ಟನಲ್ಲವೇ? ಅಮ್ನೋನನು ನಿನ್ನ ಸೋದರ. ತಂಗಿಯೇ, ಈಗ ಸದ್ಯಕ್ಕೆ ಸುಮ್ಮನಿರು. ಇದರಿಂದ ನೀನು ಹೆಚ್ಚು ಗಲಿಬಿಲಿಯಾಗದಿರು” ಎಂದು ಹೇಳಿದನು. ತಾಮಾರಳು ಏನನ್ನೂ ಹೇಳಲಿಲ್ಲ. ಅವಳು ಅಬ್ಷಾಲೋಮನ ಮನೆಯಲ್ಲಿ ವಾಸಿಸಲು ಹೋದಳು. ಅಧ್ಯಾಯವನ್ನು ನೋಡಿ |