Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:21 - ಕನ್ನಡ ಸಮಕಾಲಿಕ ಅನುವಾದ

21 ಅರಸನಾದ ದಾವೀದನು ಇವುಗಳನ್ನೆಲ್ಲಾ ಕೇಳಿದಾಗ ಬಹು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರಾಜನಾದ ದಾವೀದನಿಗೆ ಈ ವರ್ತಮಾನವು ತಿಳಿದು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:21
10 ತಿಳಿವುಗಳ ಹೋಲಿಕೆ  

ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.


ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.


ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.


ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು.


ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು