Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:24 - ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು ಅರಸನ ಬಳಿಗೂ ಹೋಗಿ, “ಅರಸರೇ, ತಮ್ಮ ಸೇವಕನಾದ ನಾನು ಕುರಿಗಳ ಉಣ್ಣೆಕತ್ತರಿಸುವವರನ್ನು ಕರೆಸಿದ್ದೇನೆ. ಅರಸನು ತಮ್ಮ ಸೇವಕರ ಸಮೇತ ಅಲ್ಲಿಗೆ ಚಿತ್ತೈಸೋಣವಾಗಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಅರಸನ ಬಳಿಗೂ ಹೋಗಿ ಅವನನ್ನು - ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರಿಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಚಿತ್ತಯಿಸೋಣವಾಗಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಬ್ಷಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:24
8 ತಿಳಿವುಗಳ ಹೋಲಿಕೆ  

ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.


“ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.


ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.


ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು