Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:25 - ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸನು, “ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಕಷ್ಟವಾಗುವುದು,” ಎನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ; ಅವನನ್ನು ಆಶೀರ್ವದಿಸಿದನು, ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನು ಅವನಿಗೆ - ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ, ಅವನನ್ನು ಆಶೀರ್ವದಿಸಿದನು, ಅಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:25
9 ತಿಳಿವುಗಳ ಹೋಲಿಕೆ  

ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.


“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.


ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು.


ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು