Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:31 - ಕನ್ನಡ ಸಮಕಾಲಿಕ ಅನುವಾದ

31 ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಅರಸನು ದುಃಖತಾಳಲಾರದೆ ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮತಮ್ಮ ಬಟ್ಟೆಗಳನ್ನು ಹರಕೊಂಡು ಅವನ ಹತ್ತಿರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ರಾಜನಾದ ದಾವೀದನು ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:31
8 ತಿಳಿವುಗಳ ಹೋಲಿಕೆ  

ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು