2 ಸಮುಯೇಲ 13:34 - ಕನ್ನಡ ಸಮಕಾಲಿಕ ಅನುವಾದ34 ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 (ಅಬ್ಷಾಲೋಮನು ತಲೆ ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದುಬರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 (ಅಬ್ಷಾಲೋಮನು ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವದನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಬ್ಷಾಲೋಮನು ಓಡಿಹೋದನು. ಆ ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು. ಅಧ್ಯಾಯವನ್ನು ನೋಡಿ |