2 ಸಮುಯೇಲ 13:5 - ಕನ್ನಡ ಸಮಕಾಲಿಕ ಅನುವಾದ5 ಆಗ ಯೋನಾದಾಬನು ಅವನಿಗೆ, “ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವುದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ, ‘ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು. ನಾನು ಅವಳ ಕೈಯಿಂದ ಉಣ್ಣುವ ಹಾಗೆ, ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ, ನನಗೆ ಆಹಾರ ಕೊಡಲಿ,’ ಎಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಯೋನಾದಾಬನು, “ನೀನು ಅಸ್ವಸ್ಥನಾದವನಂತೆ ನಟಿಸಿ ಹಾಸಿಗೆಯ ಮೇಲೆ ಮಲಗಿಕೋ; ನಿನ್ನ ತಂದೆ ನಿನ್ನನ್ನು ನೋಡುವುದಕ್ಕೆ ಬಂದಾಗ, ‘ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸಿ. ಆಕೆ ನನ್ನೆದುರಿನಲ್ಲೇ ಸಿದ್ಧಮಾಡಿಕೊಡುವುದಾದರೆ ಊಟಮಾಡುತ್ತೇನೆ’ ಎಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೋನಾದಾಬನು ಅವನಿಗೆ - ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ, ನಿನ್ನ ತಂದೆಯು ನಿನ್ನನ್ನು ನೋಡುವದಕ್ಕೆ ಬಂದಾಗ ಅವನಿಗೆ - ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೇ ಸಿದ್ಧಮಾಡಿ ಕೊಡುವದಾದರೆ ಊಟಮಾಡೇನು ಎಂದು ಹೇಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು. ಅಧ್ಯಾಯವನ್ನು ನೋಡಿ |