2 ಸಮುಯೇಲ 13:7 - ಕನ್ನಡ ಸಮಕಾಲಿಕ ಅನುವಾದ7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣ ಅಮ್ನೋನನ ಮನೆಗೆ ಹೋಗಿ ಅವನಿಗಾಗಿ ಆಹಾರವನ್ನು ಸಿದ್ಧಮಾಡು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ - ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು. ಅಧ್ಯಾಯವನ್ನು ನೋಡಿ |