Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಕೆಯು - ಅರಸನು ಈ ತೀರ್ಪುಕೊಟ್ಟದ್ದರಿಂದ ತನ್ನನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟವನನ್ನು ಸೇರಿಸಿಕೊಳ್ಳಲೊಲ್ಲದೆ ಹೋಗುವದರಿಂದ ದೇವಪ್ರಜೆಗೆ ವಿರೋಧವಾಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:13
7 ತಿಳಿವುಗಳ ಹೋಲಿಕೆ  

ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;


ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು