Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:14 - ಕನ್ನಡ ಸಮಕಾಲಿಕ ಅನುವಾದ

14 ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:14
31 ತಿಳಿವುಗಳ ಹೋಲಿಕೆ  

ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.


ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.”


ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.


ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.


ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.


ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.


ದೇವರಲ್ಲಿ ಪಕ್ಷಪಾತವಿಲ್ಲ.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.


ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ.


ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ. ಅವರನ್ನು ಹೂಳಿಡುವವನೊಬ್ಬನೂ ಇಲ್ಲ.


ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


“ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.


“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.


ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.


ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.


ದೇವರ ಒಡಂಬಡಿಕೆಯ ಪ್ರೀತಿಯು ಸದಾಕಾಲಕ್ಕೆ ನಿಂತು ಹೋಯಿತೋ? ತಲತಲಾಂತರಕ್ಕೂ ವಾಗ್ದಾನ ಮುಗಿದು ಹೋಯಿತೋ?


ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.


ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು