16 ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
16 ಅರಸರು ತಮ್ಮ ಸೇವಕಿಯಾದ ನನ್ನ ಬಿನ್ನಹವನ್ನು ಆಲಿಸಿ, ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದು ಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ, ತಪ್ಪಿಸಿ ರಕ್ಷಿಸುವಿರೆಂದು ನಂಬಿಕೊಂಡಿದ್ದೇನೆ.
16 ರಾಜನು ನನ್ನನ್ನೂ ನನ್ನ ಮಗನನ್ನೂ ಕೊಲ್ಲಲು ಇಚ್ಛಿಸುವ ವ್ಯಕ್ತಿಯಿಂದ ನಮ್ಮಿಬ್ಬರನ್ನೂ ರಕ್ಷಿಸಬಹುದು; ದೇವರು ನಮಗೆ ಕೊಟ್ಟಿರುವ ಸ್ವಾಸ್ತ್ಯವನ್ನು ನಮ್ಮಿಂದ ಕಸಿದುಕೊಳ್ಳದಂತೆ ಕಾಪಾಡಬಹುದು.’
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.
ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.