2 ಸಮುಯೇಲ 14:25 - ಕನ್ನಡ ಸಮಕಾಲಿಕ ಅನುವಾದ25 ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲ್ಯರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರು ಅಬ್ಷಾಲೋಮನನ್ನು, ಅವನ ಸುಂದರ ರೂಪಕ್ಕಾಗಿ ಬಹಳ ಹೊಗಳುತ್ತಿದ್ದರು. ಇಸ್ರೇಲಿನಲ್ಲಿ ಅವನಷ್ಟು ರೂಪವಂತನು ಬೇರೆ ಯಾರೂ ಇರಲಿಲ್ಲ. ಅಬ್ಷಾಲೋಮನ ತಲೆಯಿಂದ ಪಾದಗಳವರೆಗೆ ಯಾವ ಕಳಂಕವೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.