Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:26 - ಕನ್ನಡ ಸಮಕಾಲಿಕ ಅನುವಾದ

26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ತಲೆಗೂದಲು ಬಹುಭಾರವಾಗುತ್ತಿದ್ದುದರಿಂದ ಪ್ರತಿವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ತಲೆಗೂದಲು ಸರಕಾರೀ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ತಲೆಗೂದಲು ಬಹುಭಾರವಾಗುವದರಿಂದ ಪ್ರತಿ ವರುಷದ ಅಂತ್ಯದಲ್ಲಿ ಬೋಳಿಸಿಕೊಳ್ಳುವನು. ಆಗ ಅವನ ಕೂದಲು ಸರಕಾರೀ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರತಿ ವರ್ಷಾಂತ್ಯದಲ್ಲಿಯೂ ಅಬ್ಷಾಲೋಮನು ತನ್ನ ತಲೆಕೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಕೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:26
7 ತಿಳಿವುಗಳ ಹೋಲಿಕೆ  

“ ‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು.


ಪುರುಷನು ಕೂದಲನ್ನು ಬೆಳೆಸಿಕೊಂಡರೆ, ಅದು ಅವನಿಗೆ ಅವಮಾನಕರವಾಗಿದೆಯೆಂದೂ


ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.


ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು