ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”
ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.
ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.