2 ಸಮುಯೇಲ 14:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.