Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:12 - ಕನ್ನಡ ಸಮಕಾಲಿಕ ಅನುವಾದ

12 ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:12
26 ತಿಳಿವುಗಳ ಹೋಲಿಕೆ  

ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ.


ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು.


ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,


ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.


ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.


ಅಬ್ಷಾಲೋಮನೂ, ಇಸ್ರಾಯೇಲರಾದ ಸಮಸ್ತ ಜನರೂ, ಅವನ ಸಂಗಡ ಅಹೀತೋಫೆಲನೂ ಯೆರೂಸಲೇಮಿಗೆ ಬಂದರು.


ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;


ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು