Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:14 - ಕನ್ನಡ ಸಮಕಾಲಿಕ ಅನುವಾದ

14 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಯೆರೂಸಲೇವಿುನಲ್ಲಿದ್ದ ತನ್ನ ಸೇವಕರಿಗೆ - ಏಳಿರಿ, ಓಡಿ ಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:14
12 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”


ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.


“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.


ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.


ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು