2 ಸಮುಯೇಲ 15:20 - ಕನ್ನಡ ಸಮಕಾಲಿಕ ಅನುವಾದ20 ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು. ಅಧ್ಯಾಯವನ್ನು ನೋಡಿ |