2 ಸಮುಯೇಲ 15:25 - ಕನ್ನಡ ಸಮಕಾಲಿಕ ಅನುವಾದ25 ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅರಸನು ಚಾದೋಕನಿಗೆ - ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು; ಯೆಹೋವನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಆತನನ್ನೂ ಆತನ ಆಲಯವನ್ನೂ ನೋಡುವ ಹಾಗೆ ತಾನೇ ನನ್ನನ್ನು ಹಿಂದಕ್ಕೆ ಬರಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ. ಅಧ್ಯಾಯವನ್ನು ನೋಡಿ |