2 ಸಮುಯೇಲ 15:30 - ಕನ್ನಡ ಸಮಕಾಲಿಕ ಅನುವಾದ30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು. ಅಧ್ಯಾಯವನ್ನು ನೋಡಿ |