Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:32 - ಕನ್ನಡ ಸಮಕಾಲಿಕ ಅನುವಾದ

32 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:32
20 ತಿಳಿವುಗಳ ಹೋಲಿಕೆ  

ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.


ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.


ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.


ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರ ಹೋದಾಗ, ಮೆಫೀಬೋಶೆತನ ಸೇವಕ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡೆದುಕೊಂಡು ಬಂದು, ಅವನನ್ನು ಎದುರುಗೊಂಡನು. ಅವುಗಳ ಮೇಲೆ ಇನ್ನೂರು ರೊಟ್ಟಿಗಳೂ, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳೂ, ಬೇಸಿಗೆ ಕಾಲದ ನೂರು ಹಣ್ಣುಗಳೂ, ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.


ಆದರೆ ಅಬ್ಷಾಲೋಮನು, “ಅರ್ಕಿಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ,” ಎಂದನು.


ಹೂಷೈಯ ಮಗ ಬಾಣಾ ಆಶೇರದಲ್ಲಿ ಮತ್ತು ಆಲೋತಿನಲ್ಲಿ ಅಧಿಕಾರಿ.


ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ.


ಅಬ್ಷಾಲೋಮನೂ, ಇಸ್ರಾಯೇಲರಾದ ಸಮಸ್ತ ಜನರೂ, ಅವನ ಸಂಗಡ ಅಹೀತೋಫೆಲನೂ ಯೆರೂಸಲೇಮಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು