Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:34 - ಕನ್ನಡ ಸಮಕಾಲಿಕ ಅನುವಾದ

34 ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ - ಅರಸನೇ, ನಾನು ನಿನ್ನ ಸೇವಕನು; ಮುಂಚೆ ನಿನ್ನ ತಂದೆಯನ್ನು ಸೇವಿಸಿದಂತೆ ಈಗ ನಿನ್ನನ್ನು ಸೇವಿಸುತ್ತೇನೆ ಎಂದು ಹೇಳುವದಾದರೆ ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ನಿನಗೆ ಅನುಕೂಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:34
5 ತಿಳಿವುಗಳ ಹೋಲಿಕೆ  

“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.


ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು