Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:6 - ಕನ್ನಡ ಸಮಕಾಲಿಕ ಅನುವಾದ

6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲ್ಯರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:6
6 ತಿಳಿವುಗಳ ಹೋಲಿಕೆ  

ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.


ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.


ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು