Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:7 - ಕನ್ನಡ ಸಮಕಾಲಿಕ ಅನುವಾದ

7 ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾಲ್ಕು ವರ್ಷಗಳಾದನಂತರ ಅಬ್ಷಾಲೋಮನು ಅರಸನಿಗೆ, “ನಾನು ಸರ್ವೇಶ್ವರನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ, ಅಪ್ಪಣೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾಲ್ಕು ವರುಷಗಳಾದನಂತರ ಅಬ್ಷಾಲೋಮನು ಅರಸನಿಗೆ - ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ, ಅಪ್ಪಣೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಲ್ಕು ವರ್ಷಗಳ ಬಳಿಕ ಅಬ್ಷಾಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:7
10 ತಿಳಿವುಗಳ ಹೋಲಿಕೆ  

ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು;


ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು