Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:9 - ಕನ್ನಡ ಸಮಕಾಲಿಕ ಅನುವಾದ

9 ಅರಸನು ಅವನಿಗೆ, “ಸಮಾಧಾನವಾಗಿ ಹೋಗು,” ಎಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅರಸನು, “ಹೋಗು, ನಿನಗೆ ಶುಭವಾಗಲಿ!” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರಸನು - ಹೋಗು, ನಿನಗೆ ಶುಭವಾಗಲಿ ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸಮಾಧಾನದಿಂದ ಹೋಗು” ಎಂದು ರಾಜನಾದ ದಾವೀದನು ಹೇಳಿದನು. ಅಬ್ಷಾಲೋಮನು ಹೆಬ್ರೋನಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:9
5 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.


ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.


ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.


ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.


ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು