Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:10
21 ತಿಳಿವುಗಳ ಹೋಲಿಕೆ  

ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು?


ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು.


ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.


“ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು