2 ಸಮುಯೇಲ 16:13 - ಕನ್ನಡ ಸಮಕಾಲಿಕ ಅನುವಾದ13 ದಾವೀದನೂ, ಅವನ ಸೇವಕರೂ ಹಾದಿ ಹಿಡಿದು ಹೋಗುವಾಗ, ಶಿಮ್ಮಿ ಬೆಟ್ಟದ ಓರೆಯಲ್ಲಿ ಬಂದು, ಅವನಿಗೆದುರಾಗಿ ನಡೆದನು. ಅವನು ದಾವೀದನನ್ನು ದೂಷಿಸಿ, ಮಣ್ಣನ್ನು ತೂರಿ, ಕಲ್ಲುಗಳನ್ನು ದಾವೀದನ ಮೇಲೆ ಎಸೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲೆಸೆಯುತ್ತಾ ಧೂಳೆರಚುತ್ತಾ ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು. ಅಧ್ಯಾಯವನ್ನು ನೋಡಿ |