Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:20
11 ತಿಳಿವುಗಳ ಹೋಲಿಕೆ  

ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.


ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು.


ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು