Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:23 - ಕನ್ನಡ ಸಮಕಾಲಿಕ ಅನುವಾದ

23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟು ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:23
20 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆಯ್ದುಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು