Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:11 - ಕನ್ನಡ ಸಮಕಾಲಿಕ ಅನುವಾದ

11 “ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:11
14 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.


ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.


ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.


ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.


ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು