2 ಸಮುಯೇಲ 17:8 - ಕನ್ನಡ ಸಮಕಾಲಿಕ ಅನುವಾದ8 ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ತಂದೆಯೂ ಅವನ ಜನರೂ ಶೂರರಾಗಿದ್ದಾರೆಂದೂ ಈಗ ಅವರು ಮರಿಯನ್ನು ಕಳಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದೂ ನಿನಗೆ ಗೊತ್ತುಂಟಲ್ಲಾ; ಇದಲ್ಲದೆ ಅವನು ಯುದ್ಧನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿ |