Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋವಾಬನೊಂದಿಗೆ ಹತ್ತು ಮಂದಿ ಯುವಕರು ಅವನಿಗೆ ಯುದ್ಧದಲ್ಲಿ ಸಹಾಯ ಮಾಡಿದರು. ಈ ಹತ್ತು ಜನರೂ ಅಬ್ಷಾಲೋಮನನ್ನು ಸುತ್ತುವರಿದು ಅವನನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:15
9 ತಿಳಿವುಗಳ ಹೋಲಿಕೆ  

ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.


ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.


ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.


ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು