Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:19
15 ತಿಳಿವುಗಳ ಹೋಲಿಕೆ  

ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು.


ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.


ಯೋನಾತಾನನೂ, ಅಹೀಮಾಚನೂ ಏನ್ ರೋಗೆಲ್ ಎಂಬಲ್ಲಿ ಇದ್ದರು. ಒಬ್ಬ ಸೇವಕಿ ಹೋಗಿ ಅವರಿಗೆ ತಿಳಿಸಬೇಕಾಗಿತ್ತು. ಅನಂತರ ಅವರು ಹೋಗಿ ಅರಸನಾದ ದಾವೀದನಿಗೆ ಹೇಳಬೇಕಾಗಿತ್ತು. ಏಕೆಂದರೆ ಪಟ್ಟಣದಲ್ಲಿ ಪ್ರವೇಶಿಸುವುದನ್ನು ಬೇರೆಯವರು ನೋಡುವ ಗಂಡಾಂತರಕ್ಕೆ ಒಳಗಾಗಲು ಅಪೇಕ್ಷಿಸಿರಲಿಲ್ಲ.


ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ,


ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು