Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:2 - ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:2
14 ತಿಳಿವುಗಳ ಹೋಲಿಕೆ  

ಆ ಮುನ್ನೂರು ಜನರನ್ನು ಮೂರು ಭಾಗವಾಗಿ ಹಂಚಿ, ಎಲ್ಲರ ಕೈಯಲ್ಲಿ ತುತೂರಿಗಳನ್ನೂ, ಬರಿದಾದ ಕೊಡಗಳನ್ನೂ, ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟನು.


ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.


“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.


ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.


ಮಧ್ಯರಾತ್ರಿ ಆರಂಭದ ಜಾವದಲ್ಲಿ ಕಾವಲುಗಾರರನ್ನು ಬದಲಾಯಿಸಿದಾಗ, ಗಿದ್ಯೋನನೂ, ಅವನ ಸಂಗಡ ಇದ್ದ ನೂರು ಮಂದಿಯೂ ಪಾಳೆಯ ಹೊರಗೆ ಬಂದು, ತುತೂರಿಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.


ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.


ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು