Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚಾದೋಕನ ಮಗನಾದ ಅಹೀಮಾಚನು ತಿರಿಗಿ ಯೋವಾಬನಿಗೆ - ಆಗುವದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವದಕ್ಕೆ ನನಗೆ ಅಪ್ಪಣೆಕೊಡು ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು - ಮಗನೇ, ಯಾಕೆ ಹೋಗಬೇಕನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವದಿಲ್ಲವಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಚಾದೋಕನ ಮಗನಾದ ಅಹೀಮಾಚನು ಯೋವಾಬನನ್ನು ಮತ್ತೆ ಬೇಡುತ್ತಾ, “ಏನು ಸಂಭವಿಸುತ್ತದೆಯೊ ಸಂಭವಿಸಲಿ, ಇಥಿಯೋಪ್ಯದವನ ಹಿಂದೆ ಓಡಿಹೋಗಲು ನನಗೆ ಅವಕಾಶಕೊಡು!” ಎಂದನು. ಯೋವಾಬನು, “ಮಗನೇ, ಈ ವರ್ತಮಾನವನ್ನು ತೆಗೆದುಕೊಂಡು ಹೋಗಲು ನೀನು ಏಕೆ ಇಚ್ಛಿಸುವೆ? ನೀನು ತೆಗೆದುಕೊಂಡು ಹೋಗುವ ವರ್ತಮಾನಕ್ಕೆ ನಿನಗೆ ಯಾವ ಬಹುಮಾನವೂ ಸಿಕ್ಕುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:22
6 ತಿಳಿವುಗಳ ಹೋಲಿಕೆ  

ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.


ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.


ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.


ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು