2 ಸಮುಯೇಲ 18:23 - ಕನ್ನಡ ಸಮಕಾಲಿಕ ಅನುವಾದ23 ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಅಹೀಮಾಚನು ತಿರಿಗಿ - ಚಿಂತೆಯಿಲ್ಲ, ನನ್ನನ್ನೂ ಕಳುಹಿಸು ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು ಹೋಗು ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅಹೀಮಾಚನು, “ಏನಾದರೂ ಆಗಲಿ, ನಾನು ಓಡಿಹೋಗುತ್ತೇನೆ” ಎಂದು ಉತ್ತರಿಸಿದನು. “ಓಡು” ಎಂದು ಯೋವಾಬನು ಅಹೀಮಾಚನಿಗೆ ಹೇಳಿದನು. ಆಗ ಅಹೀಮಾಚನು ಜೋರ್ಡನ್ ಕಣಿವೆಯ ಮೂಲಕ ಓಡಿಹೋದನು. ಅವನು ಇಥಿಯೋಪ್ಯದವನಿಗಿಂತ ಮೊದಲೇ ಹೋದನು. ಅಧ್ಯಾಯವನ್ನು ನೋಡಿ |