Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:3 - ಕನ್ನಡ ಸಮಕಾಲಿಕ ಅನುವಾದ

3 ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸೈನ್ಯದವರು ಅವನಿಗೆ - ನೀನು ಬರಬಾರದು; ನಾವು ಸೋತು ಓಡಿ ಹೋದರೆ ಶತ್ರುಗಳು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿನ್ನೊಬ್ಬನಿಗೇ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:3
8 ತಿಳಿವುಗಳ ಹೋಲಿಕೆ  

ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.


ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.


ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು