Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:31 - ಕನ್ನಡ ಸಮಕಾಲಿಕ ಅನುವಾದ

31 ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಷ್ಟರಲ್ಲಿ ಕೂಷ್ಯನೂ ಬಂದು - ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ; ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:31
11 ತಿಳಿವುಗಳ ಹೋಲಿಕೆ  

ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.


ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.


ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು