2 ಸಮುಯೇಲ 18:32 - ಕನ್ನಡ ಸಮಕಾಲಿಕ ಅನುವಾದ32 ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಲು ಅವನು - ನನ್ನ ಒಡೆಯನಾದ ಅರಸನ ಶತ್ರುಗಳಿಗೂ ಅವನಿಗೆ ಕೇಡು ಮಾಡುವದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |