Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:9
18 ತಿಳಿವುಗಳ ಹೋಲಿಕೆ  

ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ಮೋಶೆ ಹೇಳಿದ್ದಾನೆ.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.


ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.


ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು