Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:10 - ಕನ್ನಡ ಸಮಕಾಲಿಕ ಅನುವಾದ

10 ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರಿಗಿ ಕರಕೊಂಡು ಬರಬಾರದೇ? ಸುಮ್ಮನೆ ಕೂತಿರುವದೇಕೆ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:10
9 ತಿಳಿವುಗಳ ಹೋಲಿಕೆ  

ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.


ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.


ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.


ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?


ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.


ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.


ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು