Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರು ಹೀಗೆ ಮಾತಾಡಿಕೊಂಡ ಸಮಾಚಾರ ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ಮತ್ತೆ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವೇಕೆ ಹಿಂದುಳಿದಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರು ಈ ಪ್ರಕಾರ ಮಾತಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಯಾಜಕರಾದ ಚಾದೋಕ್ ಎಬ್ಯಾತಾರರಿಗೆ - ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ - ಅರಸನಾದ ನನ್ನನ್ನು ತಿರಿಗಿ ಅರಮನೆಗೆ ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:11
11 ತಿಳಿವುಗಳ ಹೋಲಿಕೆ  

ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.


ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.


ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.


ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.


ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು