Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:17 - ಕನ್ನಡ ಸಮಕಾಲಿಕ ಅನುವಾದ

17 ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತುಮಂದಿ ಸೇವಕರನ್ನೂ ಕರಕೊಂಡು ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:17
8 ತಿಳಿವುಗಳ ಹೋಲಿಕೆ  

ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು. ಅದಕ್ಕವನು, “ನಿನ್ನ ದಾಸನು ನಾನೇ,” ಎಂದನು.


ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.


ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,


ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು.


ಅರಸನಾದ ದಾವೀದನು ಬಹುರೀಮಿನವರೆಗೂ ಬಂದಾಗ, ಸೌಲನ ಗೋತ್ರದವನಾದ ಗೇರನ ಮಗ ಶಿಮ್ಮಿ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.


“ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು