Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:28 - ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:28
12 ತಿಳಿವುಗಳ ಹೋಲಿಕೆ  

ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು.


ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.


ಏಳು ವರ್ಷ ಆದ ತರುವಾಯ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರುಗಿಬಂದು ತನ್ನ ಹೊಲಮನೆಗಳಿಗೋಸ್ಕರ ಅರಸನಿಗೆ ಮೊರೆಯಿಟ್ಟಳು.


ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.


“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”


ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.


ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು.


ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು