Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:30 - ಕನ್ನಡ ಸಮಕಾಲಿಕ ಅನುವಾದ

30 ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮೆಫೀಬೋಶೆತನು ರಾಜನಿಗೆ, “ಚೀಬನೇ ಎಲ್ಲಾ ಭೂಮಿಯನ್ನು ತೆಗೆದುಕೊಳ್ಳಲಿ. ನನ್ನ ಒಡೆಯನಾದ ರಾಜನು ತನ್ನ ಸ್ವಂತ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:30
7 ತಿಳಿವುಗಳ ಹೋಲಿಕೆ  

ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.


ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.


ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.


ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.


ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು