2 ಸಮುಯೇಲ 19:41 - ಕನ್ನಡ ಸಮಕಾಲಿಕ ಅನುವಾದ41 ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಗ ಇಸ್ರಾಯೇಲ್ಯರೆಲ್ಲರೂ ಅರಸನ ಮುಂದೆ ಬಂದು ಅವನನ್ನು - ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸನನ್ನೂ ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೊರ್ದನ್‍ಹೊಳೆ ದಾಟಿಸಿ ಕರಕೊಂಡು ಬಂದದ್ದೇಕೆ ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |