Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:10 - ಕನ್ನಡ ಸಮಕಾಲಿಕ ಅನುವಾದ

10 ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 (ಸೌಲನ ಮಗನಾದ ಈಷ್ಬೋಶೆತನಿಗೆ ಆಗ ನಾಲ್ವತ್ತು ವರ್ಷ. ಇಸ್ರಯೇಲರನ್ನು ಆತ ಎರಡು ವರ್ಷ ಆಳಿದನು).ಯೆಹೂದ್ಯರು ಮಾತ್ರ ದಾವೀದನನ್ನೇ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ಸೌಲನ ಮಗನಾದ ಈಷ್ಬೋಶೆತನು ನಾಲ್ವತ್ತು ವರುಷದವನಾದಾಗ ಇಸ್ರಾಯೇಲ್ಯರನ್ನು ಆಳತೊಡಗಿ ಎರಡು ವರುಷ ರಾಜ್ಯಭಾರಮಾಡಿದನು.) ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:10
4 ತಿಳಿವುಗಳ ಹೋಲಿಕೆ  

ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.


ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.


ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು