2 ಸಮುಯೇಲ 2:13 - ಕನ್ನಡ ಸಮಕಾಲಿಕ ಅನುವಾದ13 ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ ಇವರು ಕೆರೆಯ ಈಚೆಯಲ್ಲಿಯೂ ಅವರು ಆಚೆಯಲ್ಲಿಯೂ ಕೂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು. ಅಧ್ಯಾಯವನ್ನು ನೋಡಿ |