Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:22 - ಕನ್ನಡ ಸಮಕಾಲಿಕ ಅನುವಾದ

22 ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮತ್ತೊಮ್ಮೆ ಅಬ್ನೇರನು, “ನನ್ನನ್ನು ಬಿಟ್ಟುಹೋಗು; ನಿನ್ನನ್ನು ಕೊಲ್ಲಲು ನನ್ನನ್ನೇಕೆ ಒತ್ತಾಯಿಸುವೆ? ಹಾಗೆ ಕೊಂದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ತಾನೆ ಮುಖ ತೋರಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಬ್ನೇರನು ತಿರಿಗಿ - ನನ್ನನ್ನು ಬಿಟ್ಟುಹೋಗು; ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮೋರೆತೋರಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಬ್ನೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:22
6 ತಿಳಿವುಗಳ ಹೋಲಿಕೆ  

ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು.


ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು