Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:28 - ಕನ್ನಡ ಸಮಕಾಲಿಕ ಅನುವಾದ

28 ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಜನರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟದರಿಂದ ಯುದ್ಧವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:28
5 ತಿಳಿವುಗಳ ಹೋಲಿಕೆ  

ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು.


ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.


ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.


ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.


ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು